ಪೆರಾಜೆ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ಸಾನಿಧ್ಯದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಹಬ್ಬದ ಪ್ರಯುಕ್ತ ವಿಶೇಷ ಅಭಿಷೇಕ ಮತ್ತು ಪೂಜೆಯು ಆ.17 ರಂದು ನಡೆಯಿತು.
ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಸೀಯಾಳಾಭಿಷೇಕ ಮತ್ತು ಕ್ಷೀರಾಭಿಷೇಕವು ನಡೆದು ಮಹಾ ಪೂಜೆಯು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊತ್ತೇಸರರು ಹಾಗೂ ಸಮಿತಿಯಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ಆಗಮಿಸಿ ಪ್ರಸಾದ ವಿತರಿಸಿದರು.